ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]