2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]